nia
ಬೆಂಗಳೂರು : 11 ಜನ ಸಾವಿಗೆ ಕಾರಣವಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ(ಎನ್‍ಐಎ) ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ಕಾಲ್ತುಳಿತ ಪ್ರಕರಣವು ದಿನದಿಂದ ದಿನಕ್ಕೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿರುವುದರಿಂದ ಎನ್‍ಐಎ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದಿನ ವಾರದಿಂದ ಪ್ರಾರಂಭಿಸಲಿದೆ ಎಂದು ಗೊತ್ತಾಗಿದೆ.
ಇದು ಆಕಸ್ಮಿಕವಾಗಿ ನಡೆದ ಘಟನೆಯೋ ಅಥವಾ ಇದರ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡ ಇದೆಯೇ ಎಂಬುದನ್ನು ಪತ್ತೆ ಮಾಡಲು ಎನ್‍ಐಎ ಮುಂದಾಗಿದೆ.
ಮೂಲಗಳ ಪ್ರಕಾರ ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಕೆಲವು ಅಧಿಕಾರಿಗಳ ಮೇಲೆ ಸರ್ಕಾರದ ಮಟ್ಟದಲ್ಲಿ ಪ್ರಭಾವಿಯಾಗಿರುವವರ ಒತ್ತಡ ಹಾಕಿಯೇ ಆಯೋಜನೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಹೀಗಾಗಿ ಏಕಾಏಕಿ ಕಾರ್ಯಕ್ರಮವನ್ನು ಆಯೋಜಿಸಿದ್ದರ ಉದ್ದೇಶ? ಕಾರ್ಯಕ್ರಮದಲ್ಲಿ ಪ್ರಭಾವಿ ಸಚಿವರ ಪುತ್ರರೊಬ್ಬರು ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಏಕೆ ಎಂಬ ಪ್ರಶ್ನೆ ಎದುರಾಗಿದೆ.
ಹೀಗಾಗಿ ಪ್ರಕರಣದ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡ, ಸಮಾಜಘಾತುಕ ಶಕ್ತಿಗಳ ಶಾಮೀಲು ಕುರಿತಂತೆ ಎನ್‍ಐಎ ತನಿಖೆ ನಡೆಸಲು ಮುಂದಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್‍ಕುಮಾರ್, ಡಿಸಿಪಿ ಶೇಖರ್ ಅವರುಗಳ ದೂರವಾಣಿ ಕರೆಗಳ ವಿವರವನ್ನು ನೀಡುವಂತೆ ಎನ್‍ಐಎ ಈಗಾಗಲೇ ಸೂಚನೆ ಕೊಟ್ಟಿದೆ.
ಇದನ್ನೂ ಓದಿ:- 11 ಜನರ ಸಾವಿಗೆ ಸಿಎಂ, ಡಿಸಿಎಂ, ಗೃಹ ಸಚಿವರೇ ನೇರ ಹೊಣೆ: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್
ಕಾರ್ಯಕ್ರಮ ಆಯೋಜಿಸಲು ಕೆಲವು ಹಿರಿಯ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸರ್ಕಾರದ ಮಟ್ಟದಲ್ಲಿ ಪ್ರಭಾವಶಾಲಿಯಾಗಿರುವ ಇಬ್ಬರು ಒತ್ತಡ ಹಾಕಿಯೇ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎಂಬ ಆರೋಪವೂ ಇದೆ.
ಆರ್.ಸಿ.ಬಿ ವಿಜೇತರಾದ ನಂತರ ಬೆಂಗಳೂರಿಗೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ನಿರೀಕ್ಷೆಗೂ ಮೀರಿದ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧದತ್ತ ದೌಡಾಯಿಸಿದ್ದರು.
ಇಷ್ಟು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಆಗಮಿಸಿದ್ದರೂ ಭದ್ರತೆಯನ್ನು ಏಕೆ ಒದಗಿಸಲಾಗಲಿಲ್ಲ? ಉದ್ದೇಶಪೂರಕವಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಇಲ್ಲವೇ ಆಕಸ್ಮಿಕವಾಗಿ ನಡೆದ ಘಟನೆಯೇ ಎಂಬುದರ ಬಗ್ಗೆ ವಿಸ್ತೃತ ತನಿಖೆಯನ್ನು ಎನ್‍ಐಎ ಕೈಗೆತ್ತಿಕೊಳ್ಳಲಿದೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…