ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ 5 ಐಪಿಎಸ್ ಅಧಿಕಾರಿಗಳ ಅಮಾನತುಗೊಂಡಿದ್ದ ಆದೇಶವನ್ನು ರಾಜ್ಯ ಸರ್ಕಾರ 52 ದಿನಗಳ ನಂತರ ಸೋಮವಾರ ಹಿಂಪಡೆದಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ: ಬಿ.ದಯಾನಂದ, ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ, ಡಿಸಿಪಿ ಶೇಖರ್, ಎಸಿಪಿ ಎಚ್.ಟಿ.ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಇನ್‌ಸ್ಪೆಕ್ಟರ್ ಗಿರೀಶ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.
ಅರ್ಜಿದಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಃ ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಆದೇಶಿಸಿದೆ.





