ರಾಜ್ಯ

ಬೆಂಗಳೂರು ಕಾಲ್ತುಳಿತ : ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ವಾಪಸ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ 5 ಐಪಿಎಸ್ ಅಧಿಕಾರಿಗಳ ಅಮಾನತುಗೊಂಡಿದ್ದ ಆದೇಶವನ್ನು ರಾಜ್ಯ ಸರ್ಕಾರ 52 ದಿನಗಳ ನಂತರ ಸೋಮವಾರ ಹಿಂಪಡೆದಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ: ಬಿ.ದಯಾನಂದ, ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ, ಡಿಸಿಪಿ ಶೇಖರ್, ಎಸಿಪಿ ಎಚ್.ಟಿ.ಬಾಲಕೃಷ್ಣ ಹಾಗೂ ಕಬ್ಬನ್‌ ಪಾರ್ಕ್ ಠಾಣೆಯ ಇನ್‌ಸ್ಪೆಕ್ಟರ್‌ ಗಿರೀಶ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.

ಅರ್ಜಿದಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಃ ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಆದೇಶಿಸಿದೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

27 mins ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

3 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

4 hours ago