ರಾಜ್ಯ

ಬೆಂಗಳೂರು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಬೆಂಗಳೂರು: ಕ್ರಿಕೆಟೆ ಆಟ ಮುಗಿಸಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ(ಜೂ.17) ಜರುಗಿದೆ.

ಬೆಂಗಳೂರಿನ ಅತ್ತಿಬೆಲೆ ನಿವಾಸಿ ಧನುಷ್‌ ಮೃತಪಟ್ಟ ವಿದ್ಯಾರ್ಥಿ. ಈತ ಭಾನುವಾರ ಮಧ್ಯಾಹ್ನ ಕ್ರಿಕೆಟ್‌ ಆಡುವುದಾಗಿ ಹೊರ ಹೋಗಿದ್ದ. ನಂತರ ಕೆರೆಯಲ್ಲಿ ಈಜಾಡಲು ಹೋಗಿದ್ದ, ನೀರು ತುಂಬಿದ್ದ ಕೆರೆಯಲ್ಲಿ ಈಜು ಬಾರದೇ ಮುಳುಗಿ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.

ಭಾನುವಾರ ಸಂಜೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸೇರಿ ಹುಡುಕಾಟ ನಡೆಸಿದ್ದರು. ಆದರೆ, ಸಂಜೆ ಕತ್ತಲಾಗುತ್ತಿದ್ದಂತೆ ಹುಡುಕಾಟ ನಿಲ್ಲಿಸಲಾಗಿತ್ತು. ಇಂದು(ಜೂ.17) ಬೆಳಿಗ್ಗೆ ಮತ್ತೆ ಹುಟುಕಾಟ ನಡೆಸಿ ಮೃತದೇಹ ಪತ್ತೆಮಾಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

1 hour ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

1 hour ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

1 hour ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

10 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

11 hours ago