ಬೆಂಗಳೂರು: ಮೊಬೈಲ್ ಚಾರ್ಚ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಪಿ.ಜಿ ಯೊಂದರಲ್ಲಿ ನಡೆದಿದೆ.
ಬೀದರ್ ಮೂಲದ ವಿದ್ಯಾರ್ಥಿ ಶ್ರೀನಿವಾಸ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಪಿ.ಜಿ ಯೊಂದರಲ್ಲಿ ವಾಸವಿದ್ದರು. ಜು.5 ರ ಶುಕ್ರವಾರ ರಾತ್ರಿ ರೂಮಿನಲ್ಲಿದ್ದ ಶ್ರೀನಿವಾಸ್, ಮೊಬೈಲ್ ಚಾರ್ಚ್ ಹಾಕಲು ಮುಂದಾಗಿದ್ದಾರೆ. ಈ ವೇಳೆ ಚಾರ್ಚ್ ಹಾಕುವಾಗ ವಿದ್ಯುತ್ ಪ್ರವಹಿಸಿದೆ. ಪರಿಣಾಮ ಶ್ರೀನಿವಾಸ್ ಮೃತಪಟ್ಟಿದ್ದಾನೆ. ಪ್ರಜ್ಞಾಹೀನವಾಗಿ ಬಿದ್ದ್ದ ಶ್ರೀನಿವಾಸ್‌ನನ್ನು ಕಂಡ ಸ್ನೇಹಿತರು ಮುಟ್ಟಿ ಎಚ್ಚರಗೊಳಿಸಲು ಮುಂದಾಗಿದ್ದಾರೆ. ಆಗ ಅವರಿಗೂ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸರು ತಿಳಿಸಿದರು.
ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ಶ್ರೀನಿವಾಸ್ನ ನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಪರೀಕ್ಷಿಸಿ ವಿದ್ಯಾರ್ಥಿ ಮಾರ್ಗ ಮಧ್ಯಯೇ ಸಾವನ್ನಪ್ಪಿರುವುದಾಗಿ ದೃಢಪಡಿಸಿದರು ಎಂದರು. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದೆ.