Mysore
14
few clouds

Social Media

ಗುರುವಾರ, 22 ಜನವರಿ 2026
Light
Dark

ಬೆಂಗಳೂರಿನಲ್ಲಿ ನವೆಂಬರ್‌.4ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರಿನಲ್ಲಿ ನವೆಂಬರ್ 4 ರಿಂದ 6ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್‌ ವೇದಿಕೆ ಒದಗಿಸುತ್ತಿದೆ ಎಂದು ವಿವರಿಸಿದರು.

ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ತಿಳಿಸಿದರು.

Tags:
error: Content is protected !!