ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರಿನಲ್ಲಿ ನವೆಂಬರ್ 4 ರಿಂದ 6ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್ ವೇದಿಕೆ ಒದಗಿಸುತ್ತಿದೆ ಎಂದು ವಿವರಿಸಿದರು.
ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…