ರಾಜ್ಯ

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬೆಂಗಳೂರಿನ ರಸತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್‌ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿ.ವಿ.ಕೆ. ಅಯ್ಯಂಗಾರ್‌ ರಸ್ತೆ, ಆರ್‌.ಟಿ. ಸ್ಟ್ರೀಟ್‌, ಚಿಕ್ಕಪೇಟೆ, ಬಳೆಪೇಟೆ, ಗಾಂಧಿನಗರ ಭಾಗದಲ್ಲಿ ವೈಟ್‌ ಟಾಪಿಂಗ್‌ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬೆಂಗಳೂರಿನ ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಕೇಂದ್ರದಿಂದ ಒಂದು ರೂ.ಕೂಡ ನೆರವು ಸಿಗುತ್ತಿಲ್ಲ. ನಾಗರಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಇದನ್ನು ಓದಿ: ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಗುಂಡಿಗಳ ದರ್ಬಾರ್

ಇನ್ನೊಂದು ವಾರದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲೇ ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಬಾರಿ ಮಳೆ ಹೆಚ್ಚಾಗಿ ಬಂದಿದ್ದದರಿಂದಾಗಿ ಗುಂಡಿಗಳನ್ನು ಮುಚ್ಚಲು ಕಷ್ಟವಾಗುತ್ತಿದೆ. ವೈಟ್‌ ಟಾಪಿಂಗ್‌ ಕಾಮಗಾರಿ ಇದಕ್ಕೆ ಪರಿಹಾರವಾಗಿದೆ. ಸದ್ಯಕ್ಕೆ ರಸ್ತೆಗಳಿಗೆ ಒಂದು ಪದರದ ಟಾರ್‌ ಹಾಕುವಂತೆ ಜಿಬಿಎ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಬಾರಿ ಎಲ್ಲಾ ಶಾಸಕರಿಗೂ ಹಣ ನೀಡಲು ಬಜೆಟ್‌ನಲ್ಲಿ 8 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಿಕೊಂಡಿದ್ದಾಗಿ ಹೇಳಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶದ ಶಾಸಕರ ಜೊತೆಗೆ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಹಣ ನೀಡಲಾಗುತ್ತದೆ. ಈ ಮೂಲಕ ಸಮಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ ಎಂದು ಬಿಜೆಪಿಯವರು ಟೀಕೆ ಮಾಡುತ್ತಾರೆ. ಅವರ ಕಾಲದಲ್ಲಿ ಗುಂಡಿಗಳಿರಲಿಲ್ಲವೇ ಎಂದು ಕಿಡಿಕಾರಿದ ಮುಖ್ಯಮಂತ್ರಿ ಅವರು, ಹಿಂದೆ ನಾವು ಮಾಡಿದ ರಸ್ತೆಗಳನ್ನು ಹೊರತು ಪಡಿಸಿದರೆ ಬಿಜೆಪಿಯವರ ಯೋಗ್ಯತೆಗೆ ಆಡಳಿತ ನಡೆಸಿದಾಗ ಒಂದು ಹಿಡಿ ಮಣ್ಣು ಹಾಕಿರಲಿಲ್ಲ. ಜೊತೆಗೆ ಹಣ ಇಲ್ಲದೇ ಇದ್ದರೂ 2.10 ಲಕ್ಷ ರೂ. ವೆಚ್ಚದ ಯೋಜನೆಗಳಿಗೆ ಮಂಜೂರಾತಿ ನೀಡಿದ್ದರು. ಅದೆಲ್ಲಾ ಬಾರವೂ ನಮ ಮೇಲೆ ಬಿದ್ದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

6 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

8 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

9 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

10 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

10 hours ago