Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಬೆತ್ತಲೆ ಪ್ರಕರಣ: ಸಂತ್ರಸ್ತೆಗೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣದ ಸಂತ್ರಸ್ತ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಇದಕ್ಕು ಮುನ್ನ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ವಂಟಮೂರಿಯಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವುದು ಖಂಡನಾರ್ಹ. ಇದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಹೈಕೋರ್ಟ್ ಸಹ ಸರ್ಕಾರಕ್ಕೆ ಛಾಟಿ ಬೀಸಿದೆ.

ಮುಖ್ಯಮಂತ್ರಿಗಳು ಸಂತ್ರಸ್ಥೆಯನ್ನು ಇದವರೆಗೂ ಭೇಟಿ ಮಾಡಿಲ್ಲ. ಗೃಹ ಸಚಿವರು ಹೊರತುಪಡಿಸಿ ಬೇರೆ ಯಾರು ಭೇಟಿ ನೀಡಿಲ್ಲ. ರಾಜ್ಯಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು. ಮತ್ತು ಈ ಸಂಬಂಧ ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!