Mysore
18
few clouds

Social Media

ಬುಧವಾರ, 28 ಜನವರಿ 2026
Light
Dark

ಬೆಟ್ಟಿಂಗ್‌ ಆಪ್‌ ಪ್ರಚಾರ: ನಟ ಪ್ರಕಾಶ್‌ ರಾಜ್‌ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಕೇಸ್‌

ಹೈದರಾಬಾದ್‌: ಬೆಟ್ಟಿಂಗ್‌ ಅಪ್ಲಿಕೇಶನ್‌ಗಳ ಪರ ಪ್ರಚಾರ ಮಾಡಿದ್ದಕ್ಕಾಗಿ ನಟ ರಾಣಾ ದಗ್ಗುಬಾಟಿ, ಪ್ರಕಾಶ್‌ ರಾಜ್‌, ವಿಜಯ್‌ ದೇವರಕೊಂಡ ಸೇರಿದಂತೆ ಟಾಲಿವುಡ್‌ನ 25ಕ್ಕೂ ಹೆಚ್ಚು ನಟ, ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವವರು ನೀಡಿದ ದೂರಿನ ಮೇರೆಗೆ ಹೈದರಾಬಾದ್‌ನ ಮಿಯಾಪುರ್‌ ಪೊಲೀಸರು ಟಾಲಿವುಡ್‌ನ ನಟರು ಮತ್ತು ಸೊಶೀಯಲ್‌ ಮೀಡಿಯಾ ಇನ್‌ಫ್ಲೂಯನ್ಸರ್‌ಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್‌ ರಾಜ್‌, ವಿಜಯ್‌ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್‌, ಅನನ್ಯಾ, ಹನುಮಂತು, ಶ್ರೀಮುಖಿ, ಶ್ಯಾಮಲಾ, ವರ್ಷಿಣಿ ಸೇರಿದಂತೆ ಇತರ ಪ್ರಭಾವಶಾಲಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಪ್ರಸಿದ್ದ ನಟರು ಉದ್ಧೇಶ ಪೂರ್ವಕವಾಗಿ ಬೆಟ್ಟಿಂಗ್‌ ಆಪ್‌ಗಳನ್ನು ಪ್ರಚಾರ ಮಾಡುವ ಮೂಲಕ ಯುವ ಜನತೆಯ ಮನಸ್ಸನ್ನು ಹಾಳು ಮಾಡುತ್ತಿದ್ದಾರೆ. ಇದರಿಂದ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಈಡಾಗುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Tags:
error: Content is protected !!