ಹೈದರಾಬಾದ್: ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಪರ ಪ್ರಚಾರ ಮಾಡಿದ್ದಕ್ಕಾಗಿ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿದಂತೆ ಟಾಲಿವುಡ್‌ನ 25ಕ್ಕೂ ಹೆಚ್ಚು ನಟ, ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವವರು ನೀಡಿದ ದೂರಿನ ಮೇರೆಗೆ ಹೈದರಾಬಾದ್‌ನ ಮಿಯಾಪುರ್ ಪೊಲೀಸರು ಟಾಲಿವುಡ್‌ನ ನಟರು ಮತ್ತು ಸೊಶೀಯಲ್ ಮೀಡಿಯಾ ಇನ್‌ಫ್ಲೂಯನ್ಸರ್‌ಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್, ಅನನ್ಯಾ, ಹನುಮಂತು, ಶ್ರೀಮುಖಿ, ಶ್ಯಾಮಲಾ, ವರ್ಷಿಣಿ ಸೇರಿದಂತೆ ಇತರ ಪ್ರಭಾವಶಾಲಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಪ್ರಸಿದ್ದ ನಟರು ಉದ್ಧೇಶ ಪೂರ್ವಕವಾಗಿ ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡುವ ಮೂಲಕ ಯುವ ಜನತೆಯ ಮನಸ್ಸನ್ನು ಹಾಳು ಮಾಡುತ್ತಿದ್ದಾರೆ. ಇದರಿಂದ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಈಡಾಗುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…