Categories: ರಾಜ್ಯ

ಮನುಷ್ಯ ದ್ವೇಷಿ, ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ: ಸಿ.ಎಂ ಸಿದ್ದರಾಮಯ್ಯ

ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌

ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಬಡ ಕುಟುಂಬಗಳಿಗೆ ಧರ್ಮ ಸಂಸ್ಥೆ ನೀಡಿದ ಉಚಿತ ಮನೆಗಳನ್ನು ಹಸ್ತಾಂತರಿಸಿ ಅವರು  ಮಾತನಾಡಿದರು.

ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು.

ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.

ನಮ್ಮ ಧರ್ಮವನ್ನು ಪಾಲಿಸೋಣ. ಎಲ್ಲ ಧರ್ಮಗಳನ್ನೂ ಸಹಿಸಿಕೊಳ್ಳುವ ಸಹಿಷ್ಣುತೆ ಬೆಳೆಸಿಕೊಳ್ಳಿ ಎನ್ನುವುದೇ ನಮ್ಮ‌ ಸಂವಿಧಾನದ ಮಹಾನ್ ಮೌಲ್ಯ. ಇದನ್ನು ಪಾಲಿಸುವುದೇ ನಾವು ಸ್ವಾಮಿ ವಿವೇಕಾನಂದರಿಗೆ, ಸಂವಿಧಾನಕ್ಕೆ ನೀಡುವ ಮಹೋನ್ನತ ಗೌರವ ಎಂದರು.

ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ. ನಾನು ಹಿಂದುಗಳನ್ನು ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ವಿವರಿಸಿದರು.

ಹಿಂದುಳಿದವರು, ಅಲ್ಪಸಂಖ್ಯಾತರು, ಶೂದ್ರರು, ದಲಿತರು ಮತ್ತು ಇಡೀ ಮಹಿಳಾ ಕುಲವನ್ನು ಈ ಜಾತಿ ವ್ಯವಸ್ಥೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿತ್ತು. ಆದರೆ, ನಮ್ಮ ಸಂವಿಧಾನ ಇವರೆಲ್ಲರನ್ನೂ ಜಾತಿ ಸಂಕೋಲೆಯಿಂದ ಬಿಡುಗಡೆಗೊಳಿಸಿ ಶಿಕ್ಷಣ ಒದಗಿಸಿತು ಎಂದರು.

ನಾನು ವೀರಮಕ್ಕಳ ಕುಣಿತಕ್ಕೆ ಸೇರಿ ಶಿಕ್ಷಣದಿಂದ ವಂಚಿತನಾಗಿದ್ದೆ. ಆದರೆ ನಮ್ಮ ಸಂವಿಧಾನ ಮತ್ತು ಒಬ್ಬ ಗುರುಗಳ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಯಿಂದ ಶಿಕ್ಷಣ ಪಡೆದೆ. ಪರಿಣಾಮ ನಾನು ಎರಡೆರಡು ಬಾರಿ ಮುಖ್ಯಮಂತ್ರಿ ಆದೆ ಎಂದು ಹೇಳಿದರು.

ಬಸವಣ್ಣನವರು 850 ವರ್ಷಗಳ ಹಿಂದೆ ಇವನಾರವ ಎನ್ನಬೇಡಿ, ಇವ ನಮ್ಮವ ಎನ್ನಿ ಎಂದು ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿದ್ದರು. ಆದರೆ, ಇವತ್ತಿಗೂ ಜಾತಿ ಹೋಗಿಲ್ಲ ಎಂದರು.

ಕ್ರೈಸ್ತ ಧರ್ಮ ಗುರುಗಳು, ಕ್ರೈಸ್ತ ಸಂಸ್ಥೆಗಳು ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೂ ಶಿಕ್ಷಣ ಕೊಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ದೊಡ್ಡ ಕೊಡುಗೆ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಸಿಕ್ಕಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ ಎಂದರು.

ದೇವ ಒಂದೇ ನಾಮ ಹಲವು ಎನ್ನುವುದು ಎಲ್ಲರ ನಂಬಿಕೆ. ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಲಶ ಎಂದು ಬಸವಾದಿ ಶರಣರು ಹೇಳಿದ್ದು ಈ ಕಾರಣಕ್ಕಾಗಿಯೇ ಎನ್ನುತ್ತಾ, ದೇವರಿಲ್ಲದ ಜಾಗವೇ ಇಲ್ಲ ಎನ್ನುವ ಸಂದೇಶವನ್ನು ಸಾರಿದ ಕನಕದಾಸರ ಬಾಳೆಹಣ್ಣಿನ ಕತೆಯನ್ನು ವಿವರಿಸಿದರು.

ಅಂಬೇಡ್ಕರ್ ಅವರು ಸಂವಿಧಾನ ಅಂಗೀಕಾರ ಸಭೆಯಲ್ಲಿ ಮಾಡಿದ ಭಾಷಣವನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದರು.

ಕ್ರೈಸ್ತ ಧರ್ಮದ ಮಹಾನ್ ಧರ್ಮಗುರು ಪೀಟರ್ ಮಚಾಡೋ, ಸಚಿವರಾದ ಕೆ.ಜೆ.ಜಾರ್ಜ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಸಕರಾದ ಭರತ್ ರೆಡ್ಡಿ, ನಾಗೇಂದ್ರ, ಅನ್ನಪೂರ್ಣ ತುಕಾರಾಮ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

26 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

1 hour ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

1 hour ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

1 hour ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago