ರಾಜ್ಯ

ಪೋಷಣ್ ಆ್ಯಪ್ ಹ್ಯಾಕ್ ಬಗ್ಗೆ ಎಚ್ಚರವಿರಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ  ಮನವಿ
ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೋಷಣ್ ಆ್ಯಪ್ ಬಗ್ಗೆ ಜಾಗೃತಿ

ಬೆಳಗಾವಿ: ಪೋಷಣ್ ಟ್ರ್ಯಾಕರ್ ಆ್ಯಪ್ ಹ್ಯಾಕ್ ಆಗಿದೆ ಎನ್ನುವ ಮಾಹಿತಿ ಬಂದಿದೆ. ರಾಜ್ಯದ ಮಹಿಳೆಯರು, ಗರ್ಭಿಣಿಯರು ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಭುವನೇಶ್ವರಿ ಉತ್ಸವದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೈಬರ್ ವಂಚಕರು, ಗರ್ಭಿಣಿಯರು, ಮಹಿಳೆಯರ ಮಾಹಿತಿಯನ್ನು ಆ್ಯಪ್ ನಲ್ಲಿ ತಿಳಿದು ಮೊಬೈಲ್ ಮೂಲಕ ವಂಚಿಸುತ್ತಿರುವ ಪ್ರಕರಣಗಳು ಕೇಳಿಬರುತ್ತಿದ್ದು, ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು.

ಪೋಷಣ್ ಆ್ಯಪ್ ಅನ್ನು ಕೇಂದ್ರ ಸರ್ಕಾರ ನಿರ್ವಹಣೆ ಮಾಡುತ್ತದೆ. ವಂಚನೆಯಾಗುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದ ತಕ್ಷಣ ಕೇಂದ್ರದ ಗಮನ ಸೆಳೆದಿದ್ದೇವೆ. ಜೊತೆಗೆ ನಮ್ಮ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಂದೇಶ ಕಳುಹಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ ಎಂದರು.

ಈ ಕುರಿತು ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ. ಈ ಮೋಸದ ಜಾಲ ಪತ್ತೆಯಾದ ತಕ್ಷಣ ಜನರಲ್ಲಿ ಜಾಗೃತಿ ಮಾಡುವುದಕ್ಕೆ ಕ್ರಮಕೈಗೊಂಡಿದ್ದೇವೆ. ಜನ ಯಾರೂ ಇದರಲ್ಲಿ ಮೋಸ ಹೋಗಬಾರದು ಎಂದು ಸಚಿವರು ಹೇಳಿದರು.

ಎಚ್‌ಡಿಕೆ ಆರೋಪ ನಿರಾಕರಿಸಿದ ಸಚಿವೆ
ಮುಡಾ ಹಗರಣವನ್ನು ವಿಷಯಾಂತರ ಮಾಡುವ ಸಲುವಾಗಿ ತಮ್ಮ ಮೇಲೆ ಕೇಸ್ ಹಾಕಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಳ್ಳಿ ಹಾಕಿದ್ದಾರೆ. ಕಾನೂನು ಪ್ರಕಾರ ಏನು ಕ್ರಮಕೈಗೊಳ್ಳಬೇಕು ಅದನ್ನು ಕೈಗೊಳ್ಳಲಾಗಿದೆ. ಯಾವುದೇ ಪ್ರಕರಣವನ್ನು ವಿಷಯಾಂತರ ಮಾಡುವ ಅವಶ್ಯಕತೆ ಸರ್ಕಾರಕ್ಕಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago