ರಾಜ್ಯ

ಕೆಣಕಿದರೆ ಹುಷಾರು ಶಿವಕುಮಾರ್‌, ಭೂಮಿ ಮೇಲೆ ಬದುಕಲ್ಲ : ಡಿಕೆಶಿಗೆ ಹೆಚ್‌ಡಿಕೆ ವಾರ್ನಿಂಗ್‌

ನವದೆಹಲಿ : ನನ್ನನ್ನು ಕೆಣಕಿದರೆ ಹುಷಾರು ಶಿವಕುಮಾರ್‌. ನನ್ನ ಬಳಿ ಇರುವ ನಿಮ್ಮ ಮೆಟೀರಿಯಲ್‌ಗಳನ್ನು ತೆಗೆದರೆ ಈ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಾರ್ನಿಂಗ್‌ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ ಸಂಬಂಧಪಟ್ಟ ಮೆಟೀರಿಯಲ್‌ಗಳು ನಮ್ಮ ಬಳಿ ಬಂದಿರುವುದು ಒಂದಾ ಎರಡ. ಎಲ್ಲಾ ತೆಗೆಯಲು ಪ್ರಾರಂಭಿಸಿದರೆ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದರು.

ಹೆಚ್‌.ಡಿ.ರೇವಣ್ಣ ಮಕ್ಕಳನ್ನು ಒಳಗೆ ಹಾಕಿಸಲು ಎಲ್ಲವನ್ನು ಮಾಡಿದ್ದೀರಿ. ನಿಮ್ಮಲ್ಲಿ ಯಾರನ್ನೆಲ್ಲಾ ಒಳಗೆ ಕಳಿಸಬೇಕು ಎಂದು ಭಗವಂತ ಈಗಾಗಲೇ ನಿರ್ಧಾರ ಮಾಡಿದ್ದಾನೆ. ಯಾವ ರಕ್ಷಣೆ ಪಡೆದುಕೊಂಡರು ನಿವು ಉಳಿಯಲು ಸಾಧ್ಯವಿಲ್ಲ. ನಾವು ಎಲ್ಲದಕ್ಕೂ ತಯಾರಾಗಿದ್ದೇವೆ ಎಂದರು.

ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ನಡೆದ ಮಾತುಕತೆಯ ಗೌಪ್ಯತೆ ನಿಮಗೆ ಹೇಗೆ ತಿಳಿಯಲು ಸಾಧ್ಯ ? ಆ ಬಗ್ಗೆ ನಿಮಗೆ ಯಾವನು ಮಾಹಿತಿ ನೀಡಿದ್ದು?

ಮುಂದಿನ ದಿನಗಳಲ್ಲಿ ಏನೇನು ಆಗುತ್ತದೆ ಎಂದು ಕಾದು ನೋಡಿ ಸ್ವಲ್ಪ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

13 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago