ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಮಹಿಳಾ ಅಧಿಕಾರಿಗೆ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆರೇಳು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಇನ್ನೂ ಪ್ರಕರಣದಲ್ಲಿ ಈ ಜಿಲ್ಲೆಯ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಬಸವೇಶ್ ವಿರುದ್ಧ ಆರೋಪ ಕೇಳಿ ಬಂದಿದೆ. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಪುತ್ರನ ಹೆಸರು ಉಲ್ಲೇಖಿಸದೆ ಆರೇಳು ಮಂದಿ ವಿರುದ್ದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ?
ಬಿ.ಎಸ್.ಬಸವೇಶ್‌ಗೆ ಸಂಬಂಧಿಸಿದ ಅಕ್ರಮ ಮರಳುಗಾರಿಕೆಯನ್ನು ತಡೆಯಲು ಭೂ ವಿಜ್ಞಾನಿ ಜ್ಯೋತಿ ಬಂದಿದ್ದರು. ಆದರೆ ಈ ಸಂದರ್ಭದಲ್ಲಿ ಬಸವೇಶ್ ಆಪ್ತರೊಬ್ಬ ಅಧಿಕಾರಿ ಜ್ಯೋತಿ ಅವರಿಗೆ ಫೋನ್ ಕರೆ ಮಾಡಿ ಮಾತನಾಡಿ ಎಂದು ಮೊಬೈಲ್ ಫೋನ್ ನೀಡಿದ್ದರು. ಈ ವೇಳೆ ಸೇವೆಗೆ ಅಡ್ಡಿಪಡಿಸುವಂತೆ ನಿಂದಿಸಿದ್ದಾರೆ ಎಂಬ ಆರೋಪವಿತ್ತು. ಅಲ್ಲದೇ ಈ ಸಂಬಂಧ ಒಂದು ವಿಡಿಯೋ ವೈರಲ್ ಆಗಿತ್ತು.
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…