Mysore
19
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ದೇಶಾದ್ಯಂತ ಬಕ್ರೀದ್‌ ಆಚರಣೆ: ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ ಸಲ್ಲಿಕೆ

bhakreedh celebration

ಬೆಂಗಳೂರು: ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ.

ಮೈಸೂರು, ಬೆಂಗಳೂರು, ನವದೆಹಲಿ, ಕಾಶ್ಮೀರ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ನಮಾಜ್‌ ಮಾಡುವ ಮೂಲಕ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷ ಪೀಡಿತರಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:- ಚಾಮರಾಜನಗರ| ಪತ್ನಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯ ಬಂಧನ

4 ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ಬಕ್ರೀದ್‌ನ ಮುಖ್ಯ ಆಶಯವಾಗಿದೆ. ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ.

Tags:
error: Content is protected !!