ಶಿವಮೊಗ್ಗ : ಸಕ್ರೆಬೈಲು ಬಿಡಾರದ ಆನೆ ಭಾನುಮತಿ (37) ಶನಿವಾರ ಹೆಣ್ಣು ಮರಿಗೆ ಜನ್ಮನೀಡಿದೆ. ತಾಯಿ ಹಾಗೂ ಮರಿ ಆನೆ ಎರಡೂ ಆರೋಗ್ಯದಿಂದ ಇವೆ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿಗೆ ಗರ್ಭಿಣಿ ಭಾನುಮತಿ ಆನೆ ಬಿಡಾರದಿಂದ ಕಾಡಿಗೆ ಮೇಯಲು ಹೋದಾಗ ಆಕೆಯ ಬಾಲಕ್ಕೆ ಕಿಡಿಗೇಡಿಗಳು ಕತ್ತಿಯಿಂದ ಗಾಯ ಮಾಡಿದ್ದರು. ವೈದ್ಯರು ಅದಕ್ಕೆ ಹೊಲಿಗೆ ಹಾಕಿ ಸೂಕ್ತ ಚಿಕಿತ್ಸೆ ನೀಡಿದ್ದರು. ನಂತರ ಭಾನುಮತಿ ಚೇತರಿಸಿಕೊಂಡಿದೆ. ಈ ಬಗ್ಗೆ ಅರಣ್ಯ ಇಲಾಖೆ ತನಿಖೆಗೂ ಸಹ ಆದೇಶಿಸಿತ್ತು.
ಇದಾದ ಮೂರನೇ ವಾರಕ್ಕೆ ಭಾನುಮತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ನಾಲ್ಕನೇ ಮರಿ ಇದಾಗಿದೆ. ಈಕೆಯ ಯಾವುದೇ ಮರಿಗಳು ಬೆಳವಣಿಗೆ ಆಗಿಲ್ಲವೆಂದು ತಿಳಿದು ಬಂದಿದೆ.
ಸದ್ಯ ಸಕ್ರಬೈಲಿನಲ್ಲಿ ಆನೆಯ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ದಸರಾ ಮೆರವಣಿಗೆಗೆ ಬಂದ ನೇತ್ರಾವತಿ ಎಂಬ ಆನೆ ಸಹ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಇದಾದ 15 ದಿನಕ್ಕೆ ಭಾನುಮತಿ ಮತ್ತೊಂದು ಹೆಣ್ಣು ಮರಿಗೆ ಜನ್ಮ ನೀಡಿದೆ. ಹೀಗಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ 6 ಹೆಣ್ಣು ಮತ್ತು 16 ಗಂಡು ಆನೆಗಳಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…