ರಾಜ್ಯ

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದ್ದು, 2022ರಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪಾದಯಾತ್ರೆ ಆಯೋಜಿಸಲಾಗಿದೆ.

ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿಯಿಂದ ಪಾದಯಾತ್ರೆಗೆ ಚಾಲನೆ ನೀಡಲಾಗಿದ್ದು, ಮತ್ತಿಕೋಟೆ, ಹೊಸನಗರ ಕ್ರಾಸ್‌ ಹಾಗೂ ನೆಲವಾಗಿಲು ಮಾರ್ಗವಾಗಿ ಶಿಕಾರಿಪುರ ಪಟ್ಟಣದತ್ತ ಪಾದಯಾತ್ರೆ ಸಾಗಲಿದೆ.

ಸುಮಾರು 10 ಕಿಲೋಮೀಟರ್‌ ಪಾದಯಾತ್ರೆ ನಡೆಯಲಿದ್ದು, ಬಳಿಕ ಶಿಕಾರಿಪುರದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

9 mins ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

51 mins ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

2 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

2 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

8 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

8 hours ago