ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅವರ ಅಳಿಯ ನಟ ಅನಿರುದ್ಧ್ ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.
ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಅವರು, ವಿಷ್ಣುವರ್ಧನ್ ಸ್ಮಾರಕ ವಿವಾದದ ಕುರಿತು ಮಾತನಾಡಿದರು. ಈ ವೇಳೆ ವಿಷ್ಣು ಸ್ಮಾರಕ ನಿರ್ಮಿಸಲು ಅಭಿಮಾನ್ ಸ್ಟುಡಿಯೋದಲ್ಲಿ 10 ಗುಂಟೆ ಜಾಗ ಮೀಸಲಿಡುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು ನಗರದ ಕೆಂಗೇರಿ ರಿಂಗ್ ರೋಡ್‌ನಲ್ಲಿರುವ ಸಾಹಸ ಸಿಂಹ, ನಟ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅದೇ ಜಾಗದಲ್ಲಿ ನಟ ವಿಷ್ಣುವರ್ಧನ್ ಸಮಾಧಿಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಕೂಡ ನಡೆದಿದೆ.
ಇದನ್ನು ಓದಿ:ಅಭಿಮಾನ್ ಸ್ಟುಡಿಯೋ ಅರಣ್ಯ ಭೂಮಿ : ಕಾನೂನು ರೀತ್ಯ ಕ್ರಮ
ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಸಲಾಗಿರುವ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋದಲ್ಲಿ ಸಮಾಧಿಯನ್ನು ತೆರವುಗೊಳಿಸಲಾಗಿದೆ.
ಮೈಸೂರಿನಲ್ಲಿ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಸಲಾಗಿದೆ. ರಿಂಗ್ ರೋಡ್‌ನಲ್ಲಿರುವ ಸಾಹಸ ಸಿಂಹ ನಟ ಡಾ.ವಿಷ್ಣುವರ್ಧನ್ ಅವರ ಮೂಲ ಸಮಾಧಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಅವರು, ವಿಷ್ಣು ಸ್ಮಾರಕ ನಿರ್ಮಿಸಲು ಅಭಿಮಾನ್ ಸ್ಟುಡಿಯೋದಲ್ಲಿ 10 ಗುಂಟೆ ಜಾಗ ಮೀಸಲಿಡುವಂತೆ ಮನವಿ ಮಾಡಿದ್ದಾರೆ.





