Mysore
23
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಕೇಸ್‌ ಆದೇಶ ಇಂದು

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಆರೋಪಕ್ಕೆ ಗುರಿಯಾಗಿರುವ ಹೊಳೆ ನರಸೀಪುರ ಶಾಸಕ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು (ಜೂನ್‌.18) ಪ್ರಕಟಿಸಲಿದೆ.

ಶಾಸಕರು-ಸಂಸದರ ವಿರುದ್ಧ ಕ್ರಿಮಿನಲ್‌ ಪ್ರಕರಣ ವಿಚಾರಣೆ ವಿಶೇಷ ಪೀಠದ ನ್ಯಾಯಾಮೂರ್ತಿ ಕೃಷ್ಣ ಎಂ ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಾಪೀಠ ಮಂಗಳವಾರ ತೀರ್ಪು ನೀಡಲಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆ ಅಪಹರಿಸಲಾಗಿದೆ ಎಂದು ಆರೋಪಿಸಿ ಭವಾನಿ ರೇವಣ್ಣ ವಿರುದ್ಧ ಕೆ.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಶಾಸಕ ಎಚ್‌ಡಿ ರೇವಣ್ಣ ಕೂಡಾ ಬಂಧನಕ್ಕೆ ಒಳಗಾಗಿದ್ದರು.

ಭವಾನಿ ರೇವಣ್ಣ ಅವರ ಹೆಸರು ಪ್ರಕರಣದಲ್ಲಿ ಇದ್ದ ಕಾರಣ ಅವರಿಗೂ ನೋಟಿಸ್‌ ಜಾರಿ ಮಾಡಲಾಗಿತ್ತು. ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ಈ ಸಂಬಂಧ ಭವಾನಿ ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು.

Tags:
error: Content is protected !!