ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಆರೋಪಕ್ಕೆ ಗುರಿಯಾಗಿರುವ ಹೊಳೆ ನರಸೀಪುರ ಶಾಸಕ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು (ಜೂನ್.18) ಪ್ರಕಟಿಸಲಿದೆ.
ಶಾಸಕರು-ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣ ವಿಚಾರಣೆ ವಿಶೇಷ ಪೀಠದ ನ್ಯಾಯಾಮೂರ್ತಿ ಕೃಷ್ಣ ಎಂ ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಾಪೀಠ ಮಂಗಳವಾರ ತೀರ್ಪು ನೀಡಲಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆ ಅಪಹರಿಸಲಾಗಿದೆ ಎಂದು ಆರೋಪಿಸಿ ಭವಾನಿ ರೇವಣ್ಣ ವಿರುದ್ಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಶಾಸಕ ಎಚ್‌ಡಿ ರೇವಣ್ಣ ಕೂಡಾ ಬಂಧನಕ್ಕೆ ಒಳಗಾಗಿದ್ದರು.
ಭವಾನಿ ರೇವಣ್ಣ ಅವರ ಹೆಸರು ಪ್ರಕರಣದಲ್ಲಿ ಇದ್ದ ಕಾರಣ ಅವರಿಗೂ ನೋಟಿಸ್ ಜಾರಿ ಮಾಡಲಾಗಿತ್ತು. ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಭವಾನಿ ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…