ಬೆಂಗಳೂರು: ರಾಜ್ಯ ಸರ್ಕಾರ ನಂದನಿ ಹಾಲಿನ ದರ ಹೆಚ್ಚಳದ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನಿಗಮಗಳ ಸಭೆ ಕರೆದ ಚರ್ಚೆ ಮಾಡಲಾಗಿದೆ. ಆ ಸಭೆಯಲ್ಲಿ 5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಬೇಕು ಎಂದು ಚರ್ಚೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇನ್ನು ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಆದರೆ ರಾಜ್ಯ ಸರ್ಕಾರದಿಂದ ಹಾಲಿನ ದರ ಹೆಚ್ಚಳ ಬಗ್ಗೆ ನಿರ್ಧಾರ ಮಾಡಿಲ್ಲ. ಹೀಗಾಗಿ ಹಾಲಿನ ದರ ಹೆಚ್ಚಳದ ಕುರಿತು ಸರ್ಕಾರದಿಂದ ಯಾವುದೇ ತೀರ್ಮಾನಿಸಿಲ್ಲ ಎಂದರು.





