Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಬಿಡದಿ ಟೌನ್‌ ಶಿಪ್‌ : ರೈತರಿಕೆ ಅಭಯ ನೀಡಿದ ಎಚ್‌ಡಿಕೆ

ಮಂಡ್ಯ : ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಉದ್ದೇಶಿತ ಬಿಡದಿ ಟೌನ್‌ಶಿಪ್‌ಗೆ ರೈತರು ವಿರೋಧ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರಿಗೆ ಮಿಡಿಯುವುದನ್ನು ಬಿಟ್ಟು ಈ ಸರ್ಕಾರ ರಿಯಲ್ ಎಸ್ಟೇಟ್ ಕುಳಗಳಿಗೆ ಮಿಡಿಯುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಬಿಡದಿ ಟೌನ್ ಶಿಪ್ ಮಾಡುವುದು ಕುಮಾರಸ್ವಾಮಿ ಅವರ ಕಾಲದಲ್ಲಿ ಆಗಿರುವ ತೀರ್ಮಾನ ಎಂದು ನನ್ನ ಹೆಸರಿನಲ್ಲಿ ಶೆಲ್ಟರ್ ತೆಗೆದುಕೊಳ್ಳಬೇಡಿ. ನನ್ನ ಕಾಲದ ತೀರ್ಮಾನವೇ ಬೇರೆ, ಇವತ್ತಿನ ತೀರ್ಮಾನಗಳೇ ಬೇರೆ ಇವೆ. ಅಂದು ಭೂಮಿ ಬೆಲೆ ದೊಡ್ಡ ಮಟ್ಟದಲ್ಲಿರಲಿಲ್ಲ. ಆದರೆ, ಇವತ್ತು ಭೂಮಿಗೆ ಭಾರೀ ಬೆಲೆ ಬಂದಿದೆ. ೯ ಸಾವಿರ ಎಕರೆ ಭೂಮಿಯನ್ನು ಟೌನ್‌ಶಿಪ್‌ಗೆ ಸ್ವಾಽನ ಮಾಡಿಕೊಳ್ಳಲು ಹೊರಟಿದ್ದಾರೆ. ಇದಕ್ಕೆ ರೈತರ ವಿರೋಧವಿದೆ. ನಾನು ರೈತರ ಪರ ಇದ್ದೇನೆ ಎಂದರು.

ಇದನ್ನೂ ಓದಿ:-ಮಹಿಳಾ ಹಾಸ್ಟೆಲ್ ಸ್ನಾನಗೃಹದಲ್ಲಿ ಕ್ಯಾಮೆರಾ ಅಳವಡಿಕೆ ; ಮಹಿಳೆ ಸೇರಿ ಇಬ್ಬರ ಬಂಧನ

ಈಗಲ್ ಟನ್‌ಗೆ ನಿಗದಿ ಮಾಡಿದಷ್ಟು ಪರಿಹಾರ ನೀಡಲಿ
ಬಿಡದಿಯಲ್ಲಿ ಸರ್ಕಾರ ಸ್ವಾಧೀನ ಮಾಡಿಕೊಳ್ಳಲು ಹೊರಟಿರುವ ಭೂಮಿಯ ವ್ಯಾಪ್ತಿಯಲ್ಲಿಯೇ ಈಗಲ್‌ಟನ್ ಗಾಲ್ಛ್ ಕ್ಲಬ್ ಇದೆ. ಅದು ಸರ್ಕಾರಿ ಖರಾಬು ಭೂಮಿ ಅತಿಕ್ರಮಿಸಿದ್ದು ಎಂದು ಆರೋಪ ಮಾಡಲಾಗಿತ್ತು. ಆ ಸಂಸ್ಥೆಯ ಮೇಲೆ ಆರೋಪಗಳನ್ನು ಹೊರಿಸಿ ೨೦೧೮ರಲ್ಲಿ ಚದರ ಅಡಿ ಲೆಕ್ಕದಲ್ಲಿ ದಂಡ ವಿಧಿಸಿದ್ದಾರೆ. ಈಗಿನ ಉಪ ಮುಖ್ಯಮಂತ್ರಿ ಹಿಂದೆ ಡಿ.ಕೆ. ಶಿವಕುಮಾರ್ ಅದೇ ಈಗಲ್ ಟನ್ ಕ್ಲಬ್‌ಗೆ ಊಟಕ್ಕೆ ಹೋದಾಗ ಅಲ್ಲಿನ ಸಿಬ್ಬಂದಿ ೯೮ ಸಾವಿರ ರೂಪಾಯಿ ಬಿಲ್ ಕೊಟ್ಟಿದ್ದರು. ನನಗೇ ಬಿಲ್ ಕೊಡುತ್ತೀರಾ ಎಂದು ೭೦ ಎಕರೆ ಖರಾಬು ಭೂಮಿಗೆ ೯೮೪ ಕೋಟಿ ರೂ.ದಂಡ ವಿಽಸಿದ್ದರು. ಅಂದರೆ, ಪ್ರತಿ ಎಕರೆಗೆ ೧೩ ಕೋಟಿ ರೂ.ದಂಡ ವಿಽಸಬೇಕು ಎಂದು ಸಂಪುಟ ಸಭೆ ತೀರ್ಮಾನ ಕೈಗೊಂಡಿತು. ನಿಮ್ಮ ಪಕ್ಷವೇ ಅಧಿಕಾರದಲ್ಲಿದ್ದಾಗ ನಿಮ್ಮವರೇ ಸಿಎಂ, ಸಚಿವರು, ಇದ್ದಾಗ ನೀವೇ ನಿಗದಿ ಮಾಡಿದ ದರ ಅದಲ್ಲವೇ? ಈಗ ನೀವೇ ರೈತರಿಗೆ ೧:೩ ಅನುಪಾತದಲ್ಲಿ ಪರಿಹಾರ ಕೊಟ್ಟುಬಿಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹಿಸಿದರು.

ಕನಕಪುರದಲ್ಲಿ ಒಣಭೂಮಿ ಇದ್ರೆ ಟೌನ್ ಶಿಪ್ ಮಾಡಲಿ
ಹಿಂದೆ ಕನಕಪುರದಲ್ಲಿ ಹಾಲಿನ ಡೇರಿ ಮಾಡುವಾಗ ರೈತರಿಗೆ ಎಷ್ಟು ದುಡ್ಡು ಕೊಟ್ಟಿರಿ? ನಿಮ್ಮ ಪಟಾಲಂಗೆ ಎಷ್ಟು ಪರಿಹಾರ ಕೊಟ್ಟಿರಿ? ಅಲ್ಲಿ ಒಣ ಬೇಸಾಯದ ಭೂಮಿ ಇದೆ ಅಂತ ನಿಮ್ಮ ಅಽಕಾರಿಗಳೇ ಹೇಳುತ್ತಿದ್ದಾರೆ. ಆ ಭೂಮಿಯನ್ನೇ ವಶಕ್ಕೆ ಪಡೆದು ಟೌನ್ ಶಿಪ್ ಮಾಡಬಹುದಲ್ಲವೇ? ರಾಜ್ಯದಲ್ಲಿ ಇಂತಹ ಒಣಭೂಮಿ ಬೇಕಾದಷ್ಟು ಇದೆ. ಅಲ್ಲೆಲ್ಲ ಮಾಡುವುದು ಬಿಟ್ಟು ಬಿಡದಿಯ ಮೇಲೆಯೇ ಯಾಕೆ ವಕ್ರದೃಷ್ಟಿ ಬೀರಿದ್ದೀರಿ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ನಿಮ್ಮ ಉದ್ದೇಶ ಬಿಡದಿಯ ಜನರನ್ನು ಉದ್ಧಾರ ಮಾಡುವುದು ಅಲ್ಲ. ನಿಮ್ಮನ್ನು ನೀವು ಉದ್ಧಾರ ಮಾಡಿಕೊಳ್ಳಲು ಈ ಯೋಜನೆ ರೂಪಿಸಿದ್ದೀರಿ ಅಷ್ಟೆ. ಭೂಮಿ ಸ್ವಾಽನ ಮಾಡಿಕೊಂಡು ಪರಿಹಾರ ಕೊಡಲು ನಿಮ್ಮಲ್ಲಿ ದುಡ್ಡಿಲ್ಲ. ಕೃಷಿಗೆ ಉತ್ತಮವಾದ ವಾತಾವರಣವಿರುವ ಕಡೆ ರೈತರನ್ನು ಒಕ್ಕಲೆಬ್ಬಿಸಬೇಡಿ. ಯಾವುದೇ ಒತ್ತಡ, ದಬ್ಬಾಳಿಕೆಗೆ ರೈತರು ಹೆದರಬಾರದು. ರೈತರೊಂದಿಗೆ ನಾನಿದ್ದೇನೆ ಎಂದು ಕೇಂದ್ರ ರೈತರಿಗೆ ರೈತರಿಗೆ ಧೈರ್ಯ ತುಂಬಿದರು.

Tags:
error: Content is protected !!