Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಈ ಹಿನ್ನಲೆಯಲ್ಲಿ ಜಾ.ದಳ ಮತ್ತು ಬಿಜೆಪಿ ನಾಯಕರ ವಿರುದ್ಧ ಪೋಸ್ಟರ್ ಸಮರ ಶುರುವಾಗಿದೆ.

ಟೌನ್‌ಶಿಪ್‌ಗೆ ಭೂಸ್ವಾಧಿನವನ್ನು ವಿರೋಧೀಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ಮತ್ತು ಜಾ.ದಳ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೆ ಬಿಜೆಪಿ, ಜಾ.ದಳ ನಾಯಕರ ವಿರುದ್ಧ ಪೋಸ್ಟರ್ ವಾರ್ ಪ್ರಾರಂಭವಾಗಿದೆ.

ಬಿಡದಿಗೆ ತೆರಳುವ ರಸ್ತೆ, ಸೇತುವೆಯ ಗೋಡೆಗಳ ಮೇಲೆ ಅಪರಿಚಿತರು ಪೋಸ್ಟರ್ ಅಂಟಿಸಿದ್ದಾರೆ. ಬಿಡದಿ ಬಳಿಯ ಅರಳಾಳುಸಂದ್ರದ ರೈತರ ಪ್ರತಿಭಟನೆ ಜಾಗಕ್ಕೆ ಇಂದು ಬಿಜೆಪಿ ನಾಯಕರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಇದರಿಂದ ಬಿಜೆಪಿ ಮತ್ತು ಜಾ.ದಳ ನಾಯಕರು ಆಕ್ರೋಶಗೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯಭರಿತ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ಪೋಸ್ಟರ್ ಮೂಲಕ ಲೇವಡಿ ಮಾಡಿರುವ ಕಿಡಿಗೇಡಿಗಳು ಯಾರು? ಪೋಸ್ಟರ್ ಅಂಟಿಸಿದವರು ಯಾರೆಂಬುದು ತಿಳಿದು ಬಂದಿಲ್ಲ. ಆದರೆ, ಇದು ರಾಜಕೀಯ ನಾಯಕರ ಆರೋಪ ಮತ್ತು ಪ್ರತ್ಯಾರೋಪಕ್ಕೆ ಎಡೆಮಾಡಿಕೊಟ್ಟಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರೈತರ ಹೋರಾಟವನ್ನು ಬೆಂಬಲಿಸಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Tags:
error: Content is protected !!