ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಈ ಹಿನ್ನಲೆಯಲ್ಲಿ ಜಾ.ದಳ ಮತ್ತು ಬಿಜೆಪಿ ನಾಯಕರ ವಿರುದ್ಧ ಪೋಸ್ಟರ್ ಸಮರ ಶುರುವಾಗಿದೆ.
ಟೌನ್‌ಶಿಪ್‌ಗೆ ಭೂಸ್ವಾಧಿನವನ್ನು ವಿರೋಧೀಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ಮತ್ತು ಜಾ.ದಳ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೆ ಬಿಜೆಪಿ, ಜಾ.ದಳ ನಾಯಕರ ವಿರುದ್ಧ ಪೋಸ್ಟರ್ ವಾರ್ ಪ್ರಾರಂಭವಾಗಿದೆ.
ಬಿಡದಿಗೆ ತೆರಳುವ ರಸ್ತೆ, ಸೇತುವೆಯ ಗೋಡೆಗಳ ಮೇಲೆ ಅಪರಿಚಿತರು ಪೋಸ್ಟರ್ ಅಂಟಿಸಿದ್ದಾರೆ. ಬಿಡದಿ ಬಳಿಯ ಅರಳಾಳುಸಂದ್ರದ ರೈತರ ಪ್ರತಿಭಟನೆ ಜಾಗಕ್ಕೆ ಇಂದು ಬಿಜೆಪಿ ನಾಯಕರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಇದರಿಂದ ಬಿಜೆಪಿ ಮತ್ತು ಜಾ.ದಳ ನಾಯಕರು ಆಕ್ರೋಶಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯಭರಿತ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.
ಪೋಸ್ಟರ್ ಮೂಲಕ ಲೇವಡಿ ಮಾಡಿರುವ ಕಿಡಿಗೇಡಿಗಳು ಯಾರು? ಪೋಸ್ಟರ್ ಅಂಟಿಸಿದವರು ಯಾರೆಂಬುದು ತಿಳಿದು ಬಂದಿಲ್ಲ. ಆದರೆ, ಇದು ರಾಜಕೀಯ ನಾಯಕರ ಆರೋಪ ಮತ್ತು ಪ್ರತ್ಯಾರೋಪಕ್ಕೆ ಎಡೆಮಾಡಿಕೊಟ್ಟಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರೈತರ ಹೋರಾಟವನ್ನು ಬೆಂಬಲಿಸಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…