Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು ಒತ್ತುವರಿ ವಿರುದ್ಧ ತಿರುಗಿಬಿದ್ದಿದ್ದಾರೆ.

ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ಕಾರಣಕ್ಕೂ ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಒತ್ತಾಯಿಸಿದ್ದಾರೆ. ಬಲವಂತವಾಗಿ ಸರ್ವೇ ಕಾರ್ಯ ನಡೆಸಿದ್ರೆ ಅಧಿಕಾರಿಗಳಿಗೆ ಪೊರಕೆ ಏಟು ಕೊಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದರ ಹೊರತಾಗಿಯೂ ಸರ್ವೆಗೆ ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ. ಜೆಎಂಸಿ ಸರ್ವೇ ಮಾಡಲು ಅಧಿಕಾರಿಗಳು ಗ್ರಾಮಕ್ಕೆ ಬಂದಿದ್ದರು. ಆದರೆ ರೈತರು ಯಾವುದೇ ಕಾರಣಕ್ಕೂ ಸರ್ವೇ ಮಾಡಲು ಅನುಮತಿ ನೀಡಲಿಲ್ಲ.

ಅಧಿಕಾರಿಗಳು ಎಷ್ಟೇ ಮನವಿ ಮಾಡಿದರೂ ರೈತರು ಕೇಳಲಿಲ್ಲ. ರೈತರು ಸರ್ವೆಗೆ ಬಂದ ಅಧಿಕಾರಿಗಳ ಕಾರನ್ನು ಸುತ್ತುವರಿದು, ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ರೈತ ಮಹಿಳೆಯರೂ ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಇದ್ದರೂ ರೈತರ ಆಕ್ರೋಶ ತಡೆಯಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗುತ್ತಿದೆ. ಪೊಲೀಸರನ್ನು ಲೆಕ್ಕಿಸದೇ ರೈತರು ಅಧಿಕಾರಿಗಳ ಕಾರಿಗೆ ಮುತ್ತಿಗೆ ಹಾಕಿ ಪೊರಕೆಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!