ರಾಜ್ಯ

ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಗುಂಡಿನ ದಾಳಿ: ಇಬ್ಬರು ಸಾವು

ಬೀದರ್‌: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ.

ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಅವರನ್ನು ಗಿರಿವೆಂಕಟೇಶ್‌ ಎಂದು ಗುರುತಿಸಲಾಗಿದೆ.

ಮತ್ತೋರ್ವ ಸಿಬ್ಬಂದಿ ಶಿವಕುಮಾರ್‌ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬ್ಯಾಂಕ್‌ ಹಾಗೂ ಎಟಿಎಂಗೆ ಹಣ ಹಾಕುವ ಪಿಎಸ್‌ಸಿ ವಾಹನದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು, ಎಟಿಎಂಗೆ ಹಣ ಹಾಕುವ ವೇಳೆ ಕಣ್ಣಿಗೆ ಖಾರದ ಪುಡಿ ಎರಚಿ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದಾರೆ.

ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್‌ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

2 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

3 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

4 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

5 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

5 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

6 hours ago