ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ.
ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಅವರನ್ನು ಗಿರಿವೆಂಕಟೇಶ್ ಎಂದು ಗುರುತಿಸಲಾಗಿದೆ.
ಮತ್ತೋರ್ವ ಸಿಬ್ಬಂದಿ ಶಿವಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬ್ಯಾಂಕ್ ಹಾಗೂ ಎಟಿಎಂಗೆ ಹಣ ಹಾಕುವ ಪಿಎಸ್‌ಸಿ ವಾಹನದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು, ಎಟಿಎಂಗೆ ಹಣ ಹಾಕುವ ವೇಳೆ ಕಣ್ಣಿಗೆ ಖಾರದ ಪುಡಿ ಎರಚಿ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದಾರೆ.
ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಬ್ಯಾಂಕ್ ಸಿಬ್ಬಂದಿಗಳ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…