ಬೆಂಗಳೂರು: ಇಂದು ( ಫೆಬ್ರವರಿ 8 ) ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಜನರಿಂದ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ವಿಧಾನಸೌಧದ ಮುಂದೆ ಜನರು ದೊಡ್ಡ ಸಂಖ್ಯೆಯಲ್ಲಿ ಹರಿದುಬಂದಿದ್ದು ತಮ್ಮ ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಈ ಜನಸ್ಪಂದನ ಕಾರ್ಯಕ್ರಮಕ್ಕೆ ಯುವಕರ ಜತೆ ಹಿರಿಯರು, ಅಂಗವಿಕಲರೂ ಆಗಮಿಸಿದ್ದಾರೆ.
ಜನರು ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಹರಿದುಬಂದ ಕಾರಣ ಮತ್ತೊಂದು ಕೌಂಟರ್ ಅನ್ನು ತೆರೆಯಲಾಗಿದೆ. ಇನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಮೆಜೆಸ್ಟಿಕ್‌ನಿಂದ ವಿಧಾನಸೌಧದವರೆಗೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬೆಳಗ್ಗೆ ಹತ್ತು ಗಂಟೆಗೆ ಶುರುವಾಗಿರುವ ಈ ಜನಸ್ಪಂದನ ಕಾರ್ಯಕ್ರಮ ಸಂಜೆ ಆರರವರೆಗೆ ನಡೆಯಲಿದೆ.
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್‌ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…