ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶ ನೀಡಿರುವುದಕ್ಕೂ ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್‌ನಿಂದ ಹಣ ಕಬಳಿಕೆ ವಿಚಾರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ಮಾಡಿರುವುದಕ್ಕೂ, ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ.
ಏಕೆಂದರೆ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿ, ಕೋಟ್ಯಾಂತರ ರೂ. ಬೆಲೆಬಾಳುವ ನಿವೇಶನವನ್ನು ಕಬಳಿಕೆ ಮಾಡಿಕೊಂಡಿದ್ದಾರೆ. ಆದರೆ ನಿರ್ಮಲಾ ಸೀತಾರಾಮನ್ ಹಣವನ್ನು ತಮ್ಮ ಸ್ವಂತಕ್ಕೆ ಬಳಸದೇ, ಪಕ್ಷಕ್ಕೆ ಬಳಸಿದ್ದಾರೆ. ಈ ಹಣದಲ್ಲಿ ಚುನಾವಣಾ ಬಾಂಡ್ ಮೂಲಕ ಕಾಂಗ್ರೆಸ್‌ಗೂ 1,200 ಕೋಟಿ ರೂ.ಗಳಿಗಿಂತ ಹೆಚ್ಚು ಹಣ ದೊರಕಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಆ ಹಣವನ್ನು ವಾಪಸ್ಸು ನೀಡಿ ಆ ನಂತರ ಕೇಂದ್ರ ಸಚಿವರ ರಾಜೀನಾಮೆ ಬಗ್ಗೆ ಮಾತನಾಡಲಿ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಯಾರಿಗೋ ಹೇಳಿ, ಬಿಜೆಪಿ ಪಕ್ಷದವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂಬುದು ಈ ದೂರಿನ ಮೂಲಕ ಸಾಬೀತಾಗಿದೆ. ಚುನಾವಣಾ ಸಂದರ್ಭದಲ್ಲಿ ಎಲ್ಲಾ ಪಕ್ಷಗಳು ದೇಣಿಗೆ ಸಂಗ್ರಹಿಸಿವೆ. ಹಾಗಾಗಿ ಹಣ ತೆಗೆದುಕೊಂಡವರ ಮೇಲೆ ಎಫಐಆರ್ ದಾಖಲಿಸುವುದಾದರೆ ಎಲ್ಲರ ಮೇಲೂ ದೂರು ದಾಖಲಿಸಬೇಕಾಗುತ್ತದೆ. ಈ ದೂರು ರಾಜಕೀಯ ಪ್ರೇರಿತವಾಗಿದೆ ಎಂದು ಸ್ಪಷ್ಟವಾಗುತ್ತದೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಲವು ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದೆ. ಆದರೆ ಈಗ ಮಾತ್ರ ಸಿಬಿಐ ಅಧಿಕಾರವನ್ನು ರಾಜ್ಯದಲ್ಲಿ ಕಿತ್ತುಕೊಳ್ಳುವ ಪ್ರಯತ್ನ ಮಾಡಿ, ಬಿಜೆಪಿ ನಾಯಕರ ವಿರುದ್ಧ ಮಾತನಾಡುತ್ತಿದೆ. ಚುನಾವಣಾ ಬಾಂಡ್ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿ ಸರ್ಕಾರದಿಂದಲೇ ಆದೇಶ ಹೊರಡಿಸಿತ್ತು. ಆದರೆ ಸಿದ್ದರಾಮಯ್ಯ ಅವರ ಮುಡಾ ಹಗರಣ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಮುಡಾ ಪ್ರಕರಣದ ಆರೋಪದಿಂದ ತಪ್ಪಿಸಿಕೊಳ್ಳಲಿ ಈ ರೀತಿಯಾಗಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿದ್ದರೆ ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಹೀಗಾಗಿ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…