Mysore
22
overcast clouds

Social Media

ಮಂಗಳವಾರ, 27 ಜನವರಿ 2026
Light
Dark

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಬಂಪರ್‌ ಉಡುಗೊರೆ ಸಿಕ್ಕಿದೆ.

ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ನಗದು ಸಹಾಯ ಹಾಗೂ ಪ್ರಜ್ವಲ್‌ ತಾಯಿ ಕಸ್ತೂರೆವ್ವ ರಿತ್ತಿಗೆ ಹೊರಗುತ್ತಿಗೆ ಆಧಾರದ ಸರ್ಕಾರಿ ಕೆಲಸ ನೀಡಲಾಗುತ್ತದೆ.

ಲಕ್ಕುಂಡಿಯಲ್ಲಿ ಚಿನ್ನ ನಿಧಿ ರೂಪದಲ್ಲಿ ಸಿಕ್ಕಿದ್ದರೂ ಯಾವುದೇ ಲಾಲಸೆಗೆ ಒಳಗಾಗದೇ ಕುಟುಂಬವು ಅದನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದು ರಾಜ್ಯಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು.

 

Tags:
error: Content is protected !!