ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ.
ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಜಾಮೀನು ಸಿಕ್ಕ ಬಳಿಕ. ಪೊಲೀಸರು ಅವರ ಗನ್ ಲೈಸೆನ್ಸ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಪೊಲೀಸರ ಅಮಾನತು ಆದೇಶಕ್ಕೆ ತಡೆ ನೀಡಿರುವ ಪೀಠವು ದರ್ಶನ್ ಅವರಿಗೆ ಸಮಾಧಾನ ತಂದಿದೆ.
ನಟ ದರ್ಶನ್ ಅವರು ಕಳೆದ 2008ರಿಂದಲೂ ಅಧಿಕೃತವಾಗಿ ಲೈಸೆನ್ಸ್ ಹೊಂದಿದ್ದರು. ಯಾವುದೇ ಕಾನೂನುಬಾಹಿರ ಚಟುವಟಿಕೆಗೇ ಶಸ್ತ್ರಾಸ್ತ್ರ ಬಳಸದಿದ್ದರೂ ಅಮಾನತು ಮಾಡುವುದು ಸರಿಯಲ್ಲ ಎಂಬ ವಾದವನ್ನು ಆಲಿಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…