Mysore
28
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

Mysore Muda case: Supreme Court gives big relief to CM Siddaramaiah's wife

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು ಹೋರಾಟದಲ್ಲಿ ಮತ್ತೊಂದು ಬಹುದೊಡ್ಡ ದೊಡ್ಡ ಗೆಲುವು ಸಿಕ್ಕಿದೆ.

ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿದ ನ್ಯಾಯಾಲಯ ಬಿ ರಿಪೋರ್ಟನ್ನು ಪುರಸ್ಕಾರ ಮಾಡಿದೆ.

ಇದರಿಂದಾಗಿ ಸ್ನೇಹಮಯಿ ಕೃಷ್ಣ ಅವರಿಗೆ ಕಾನೂನು ಹೋರಾಟದಲ್ಲಿ ಬಾರಿ ಹಿನ್ನಡೆಯಾಗಿದ್ದಾರೆ, ಸಿಎಂ ಸಿದ್ದರಾಮಯ್ಯನವರ ಕುಟುಂಬದವರು ಬಹುತೇಕ ಕಳಂಕದಿಂದ ಮುಕ್ತರಾಗಿದ್ದಾರೆ.

ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ಚಾಮಿ,ಹಾಗೂ ಜಮೀನು ಮಾಲೀಕ ದೇವರಾಜ್ ಅವರ ಮೇಲೆ ಕೇಳಿಬಂದಿದ್ದ ಆರೋಪ ಕುರಿತು ಮೈಸೂರು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಇದನ್ನು ಪುರಸ್ಕರಿಸಿದ್ದು ಉಳಿದವರ ವಿರುದ್ಧ ತನಿಕೆಯನ್ನು ಮುಂದುವರಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಸೂಚಿಸಿದೆ.

ವಾದ- ಪ್ರತಿವಾದ ಆಲಿಸಿ ಕಾಯ್ದಿರಿಸದ್ದ ತೀರ್ಪನ್ನು ಬುಧವಾರ ಪ್ರಕಟಿಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಲೋಕಾಯುಕ್ತ ಅಧಿಕಾರಿಗಳ ಬಿ ರಿಪೋರ್ಟ್ ಪುರಸ್ಕರಿಸಿ ಅರ್ಜಿಯನ್ನು ವಜಗೊಳಿಸಿ ಆದೇಶ ನೀಡಿದರು.

ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ-ರಿಪೋರ್ಟ್’ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಅಂಗೀಕರಿಸಿತು
ಕೇವಲ ಸಿದ್ದರಾಮಯ್ಯ ಮಾತ್ರವಲ್ಲದೆ, ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜ್ ಅವರಿಗೂ ನ್ಯಾಯಾಲಯ ರಿಲೀಫ್ ನೀಡಿದೆ.

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಸಿದ್ದರಾಮಯ್ಯ ಮತ್ತು ಅವರ ಕುಟುಂಬಸ್ಥರ ವಿರುದ್ಧ ಯಾವುದೇ ಅಕ್ರಮ ನಡೆದಿಲ್ಲ ಎಂದು ಅಂತಿಮ ವರದಿ (ಬಿ-ರಿಪೋರ್ಟ್) ಸಲ್ಲಿಸಿದ್ದರು. ಈ ವರದಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಮಹತ್ವದ ಆದೇಶ ಪ್ರಕಟಿಸಿದ್ದಾರೆ.

ಸಿದ್ದರಾಮಯ್ಯ ಕುಟುಂಬವು ಮುಡಾದಿಂದ ಅಕ್ರಮವಾಗಿ 14 ನಿವೇಶನ ಪಡೆದಿದೆ. ಆದರೆ, ಲೋಕಾಯುಕ್ತ ತನಿಖಾಧಿಕಾರಿ ಸರಿಯಾದ ತನಿಖೆ ನಡೆಸದೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ತನಿಖಾಧಿಕಾರಿ ಆರೋಪಿಗಳ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಈ ‘ಬಿ’ ರಿಪೋರ್ಟ್‌ ತಿರಸ್ಕರಿಸಬೇಕು. ತನಿಖಾಧಿಕಾರಿಯನ್ನು ಬದಲಿಸಬೇಕು ಎಂದು ದೂರುದಾರ ಸ್ನೇಹಮಯಿ ಮನವಿ ಮಾಡಿದ್ದರು.

ಆರೋಪಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಿ ಸಿದ್ಧಪಡಿಸಲಾಗಿರುವ ಒಟ್ಟು 27 ಸಂಪುಟಗಳ ವರದಿಯು ಎಲ್ಲ ದಸ್ತಾವೇಜುಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳನ್ನು ಒಳಗೊಂಡಿದೆ. ಈ ಕಂತೆಯನ್ನು ತನಿಖಾಧಿಕಾರಿ ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರು ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರಿಗೆ ಸಲ್ಲಿಸಿದ್ದರು.

ಆರೋಪಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಿ ಸಿದ್ಧಪಡಿಸಲಾಗಿರುವ ಒಟ್ಟು 27 ಸಂಪುಟಗಳ ವರದಿಯು ಎಲ್ಲ ದಸ್ತಾವೇಜುಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳನ್ನು ಒಳಗೊಂಡಿದೆ. ಈ ಕಂತೆಯನ್ನು ತನಿಖಾಧಿಕಾರಿ ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರು ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರಿಗೆ ಸಲ್ಲಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಮೂಡಾದಿಂದ ಪಡೆದಿದ್ದ 14 ಸೈಟ್‌ಗಳ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಿದ್ದರು. ಈ ತನಿಖೆಯ ನಂತರ ಲೋಕಾಯುಕ್ತರು ‘ಬಿ ರಿಪೋರ್ಟ್’ ಅನ್ನು ಸಲ್ಲಿಸಿದ್ದರು. ಈ ‘ಬಿ ರಿಪೋರ್ಟ್’ ಅನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸ್ವತಃ ಸ್ನೇಹಮಯಿ ಕೃಷ್ಣ ಅವರೇ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅಂತಿಮ ವರದಿ ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಿ, ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಇದಕ್ಕೂ ಮೊದಲು, ಲೋಕಾಯುಕ್ತರು ಸಲ್ಲಿಸಿದ್ದ ‘ಬಿ ರಿಪೋರ್ಟ್’ ಅನ್ನು ಪ್ರಶ್ನಿಸಿ ಇ.ಡಿ (ED) ಕೂಡ ತಕರಾರು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿತ್ತು.

ಏನಿದು ಪ್ರಕರಣ?
ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿನ 3 ಎಕರೆ 16 ಗುಂಟೆ ಜಮೀನನ್ನು ಮುಡಾ ವಶಪಡಿಸಿಕೊಂಡು, ಅದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿ ಅವರಿಗೆ ವಿಜಯನಗರದ ಪ್ರತಿಷ್ಠಿತ ಬಡಾವಣೆಯಲ್ಲಿ 14 ಬದಲಿ ನಿವೇಶನಗಳನ್ನು ನೀಡಲಾಗಿತ್ತು. ಇದರಲ್ಲಿ ಅಕ್ರಮ ನಡೆದಿದೆ ಮತ್ತು ಅಧಿಕಾರ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವು ಹೈಕೋರ್ಟ್ ಮತ್ತು ಕೆಳಹಂತದ ನ್ಯಾಯಾಲಯಗಳಲ್ಲಿ ಸುದೀರ್ಘ ಚರ್ಚೆಗೆ ಒಳಪಟ್ಟಿತ್ತು.

ಉಳಿದ ಆರೋಪಿಗಳಿಗೆ ತನಿಖಾ ಬಿಸಿ
ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಯನ್ನು ಕೈಬಿಟ್ಟಿದೆಯಾದರೂ, ಪ್ರಕರಣದ ಇತರ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಲು ಹಸಿರು ನಿಶಾನೆ ತೋರಿಸಿದೆ. ಮುಡಾ ಅಧಿಕಾರಿಗಳು ಮತ್ತು ಇತರ ಮಧ್ಯವರ್ತಿಗಳ ಪಾತ್ರದ ಕುರಿತು ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅನುಮತಿ ನೀಡಿದೆ. ಇದರಿಂದಾಗಿ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಕ್ಕಂತಾಗಿದ್ದು, ವಿರೋಧ ಪಕ್ಷಗಳ ಭ್ರಷ್ಟಾಚಾರದ ಆರೋಪಗಳಿಗೆ ಕಾನೂನಾತ್ಮಕವಾಗಿ ಹಿನ್ನಡೆಯಾದಂತಾಗಿದೆ.

ʼಬಿ ರಿಪೋರ್ಟ್’ ಎಂದರೆ?
ತನಿಖೆ ನಡೆಸಿದ ಪ್ರಾಧಿಕಾರವು ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಅಥವಾ ಆರೋಪ ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸುವ ವರದಿ. ಇದನ್ನು ನ್ಯಾಯಾಲಯ ಅಂಗೀಕರಿಸಿದರೆ, ಪ್ರಕರಣ ಮುಕ್ತಾಯಗೊಳ್ಳುತ್ತದೆ. ಅಂಗೀಕರಿಸದಿದ್ದರೆ, ತನಿಖೆ ಮುಂದುವರಿಯಬಹುದು ಅಥವಾ ಬೇರೆ ಕ್ರಮಗಳನ್ನು ಕೈಗೊಳ್ಳಬಹುದು.

Tags:
error: Content is protected !!