ತೆಲಂಗಾಣ: ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಷರತ್ತು ವಿಧಿಸಿರುವ ಕೋರ್ಟ್ ಜನಾರ್ಧನ ರೆಡ್ಡಿ ಭಾರತವನ್ನು ತೊರೆಯುವಂತಿಲ್ಲ. ಪಾಸ್‌ಪೋರ್ಟ್ ವಶಕ್ಕೆ ನೀಡಬೇಕು ಹಾಗೂ 10 ಲಕ್ಷ ರೂ ಗಳ 2 ಶ್ಯೂರಿಟಿ ನೀಡಬೇಕು ಎಂದು ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ:
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿತ್ತು. ಈ ಕೇಸ್‌ನಲ್ಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿತ್ತು.