ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಖುದ್ದು ಮಾರ್ಚ್.15 ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಮನ್ಸ್ ನೀಡಿತ್ತು. ಈ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು(ಮಾರ್ಚ್.14) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ನ್ಯಾಯಪೀಠವೂ, ಬಿ.ಎಸ್.ಯಡಿಯೂರಪ್ಪ ಅವರ ಪರ ವಕೀಲ ಸಿ.ವಿ.ನಾಗೇಶ್ ಅವರ ವಾದವನ್ನು ಆಲಿಸಿದೆ. ಬಳಿಕ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೀಡಿರುವ ಸಮನ್ಸ್ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ ಹಾಗೂ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ ಎಂದು ಆದೇಶ ಹೊರಡಿಸಿದೆ.