ರಾಜ್ಯ

ಪೋಕ್ಸೋ ಕೇಸ್‌| ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಬಿಗ್‌ ರಿಲೀಫ್‌: ‌ಸೆಷನ್ಸ್‌ ಕೋರ್ಟ್‌ ಸಮನ್ಸ್‌ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ಕೋರ್ಟ್‌ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಖುದ್ದು ಮಾರ್ಚ್‌.15 ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಮನ್ಸ್‌ ನೀಡಿತ್ತು. ಈ ಸಮನ್ಸ್‌ ಅನ್ನು ರದ್ದುಗೊಳಿಸುವಂತೆ ಕೋರಿ ಬಿ.ಎಸ್‌.ಯಡಿಯೂರಪ್ಪ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು(ಮಾರ್ಚ್.‌14) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನ್ಯಾಯಪೀಠವೂ, ಬಿ.ಎಸ್‌.ಯಡಿಯೂರಪ್ಪ ಅವರ ಪರ ವಕೀಲ ಸಿ.ವಿ.ನಾಗೇಶ್‌ ಅವರ ವಾದವನ್ನು ಆಲಿಸಿದೆ. ಬಳಿಕ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೀಡಿರುವ ಸಮನ್ಸ್‌ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ ಹಾಗೂ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ ಎಂದು ಆದೇಶ ಹೊರಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

27 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

37 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

1 hour ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

1 hour ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

2 hours ago