Mysore
22
overcast clouds

Social Media

ಶನಿವಾರ, 30 ಮೇ 2026
Light
Dark

ವಕೀಲ ದೇವರಾಜೇಗೌಡಗೆ ಬಿಗ್‌ ರಿಲೀಫ್..‌ ಹೈಕೋರ್ಟ್‌ ಜಾಮೀನು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ(ಜು.1) ಜಾಮೀನು ಮಂಜೂರು ಮಾಡಿದೆ.

ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಪೀಠ ಷರತ್ತಿನ ಜಾಮೀನು ನೀಡಿ ಆದೇಶ ಹೊರಡಿಸಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದಾರೆ. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.

Tags:
error: Content is protected !!