ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ(ಜು.1) ಜಾಮೀನು ಮಂಜೂರು ಮಾಡಿದೆ.
ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಪೀಠ ಷರತ್ತಿನ ಜಾಮೀನು ನೀಡಿ ಆದೇಶ ಹೊರಡಿಸಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದಾರೆ. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…