Mysore
17
broken clouds

Social Media

ಶನಿವಾರ, 31 ಜನವರಿ 2026
Light
Dark

ಸ್ಮಾರ್ಟ್‌ ಮೀಟರ್‌ ಟೆಂಡರ್‌ ಹಗರಣದಲ್ಲಿ ಸಚಿವ ಕೆ.ಜೆ.ಜಾರ್ಜ್‌ಗೆ ಬಿಗ್‌ ರಿಲೀಫ್‌

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‍ನಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಸೇರಿದಂತೆ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಇದರಿಂದ ಸಾವಿರಾರೂ ಕೋಟಿ ಅಕ್ರಮದ ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಮುಖಭಂಗವಾಗಿದ್ದು, ಸಚಿವ ಜಾರ್ಜ್ ನಿರಾಳರಾಗಿದ್ದಾರೆ.

ಬಿಜೆಪಿ ನಾಯಕರು ಸಲ್ಲಿಸಿದ್ದ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ಪೀಠವು ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:-ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್‌

ಜಾರ್ಜ್ ಅವರ ಜೊತೆಗೆ, ಇಂಧನ ಇಲಾಖೆಯ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಹಾಗೂ ಹೆಚ್.ಜೆ. ರಮೇಶ್ ವಿರುದ್ಧದ ಪ್ರಕರಣಗಳನ್ನೂ ಹೈಕೋರ್ಟ್ ರದ್ದುಪಡಿಸಿದೆ.
ಕ್ರಿಮಿನಲ್ ಅರ್ಜಿಗಳನ್ನು ಪುರಸ್ಕರಿಸಲಾಗಿದ್ದು, ವಿಚಾರಣಾಧೀನ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕ್ರಿಯೆಯನ್ನು ವಜಾಗೊಳಿಸಲಾಗಿದೆ. ಮೂರನೇ ಪ್ರತಿವಾದಿಯಾಗಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಈಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು.

Tags:
error: Content is protected !!