ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‍ನಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಸೇರಿದಂತೆ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಇದರಿಂದ ಸಾವಿರಾರೂ ಕೋಟಿ ಅಕ್ರಮದ ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಮುಖಭಂಗವಾಗಿದ್ದು, ಸಚಿವ ಜಾರ್ಜ್ ನಿರಾಳರಾಗಿದ್ದಾರೆ.
ಬಿಜೆಪಿ ನಾಯಕರು ಸಲ್ಲಿಸಿದ್ದ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ಪೀಠವು ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:-ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್
ಜಾರ್ಜ್ ಅವರ ಜೊತೆಗೆ, ಇಂಧನ ಇಲಾಖೆಯ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಹಾಗೂ ಹೆಚ್.ಜೆ. ರಮೇಶ್ ವಿರುದ್ಧದ ಪ್ರಕರಣಗಳನ್ನೂ ಹೈಕೋರ್ಟ್ ರದ್ದುಪಡಿಸಿದೆ.
ಕ್ರಿಮಿನಲ್ ಅರ್ಜಿಗಳನ್ನು ಪುರಸ್ಕರಿಸಲಾಗಿದ್ದು, ವಿಚಾರಣಾಧೀನ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕ್ರಿಯೆಯನ್ನು ವಜಾಗೊಳಿಸಲಾಗಿದೆ. ಮೂರನೇ ಪ್ರತಿವಾದಿಯಾಗಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಈಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…