ನವದೆಹಲಿ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಯೋಗೀಶ್ ಗೌಡ ಹತ್ಯೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಎರಡನೇ ಬಾರಿ ಜೈಲು ಸೇರಿದ್ದರಿಂದ ಸುಪ್ರೀಂಕೋರ್ಟ್‌ನಲ್ಲಿಯೇ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ. ಅಲ್ಲದೇ 2 ತಿಂಗಳ ಒಳಗಾಗಿ ವಿಚಾರಣೆಯನ್ನು ಮುಗಿಸುವಂತೆ ಸೂಚನೆ ನೀಡಿದೆ.





