ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್‌ ರೀಲಿಫ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್‌ ಯಡಿಯೂರಪ್ಪಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸದಂತೆ ನ್ಯಾಯಾಲಯ ಸೂಚನೆ ನೀಡಿದೆ.

ಪೋಕ್ಸೊ ಪ್ರಕರಣವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ಜಾಮೀನು ರಹಿತ ಅರೆಸ್ಟ್‌ ವಾರೆಂಟ್ ಜಾರಿ ಮಾಡಿ ವಿಶೇಷ ನ್ಯಾಯಾಲಯ ಗುರುವಾರ(ಜೂ.13) ಆದೇಶಿಸಿತ್ತು. ಈ ಸಂಬಂಧ ಬಿ.ಎಸ್‌ ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇಂದು(ಜೂ.15) ವಿಚಾರಣೆ ನಡೆಸಿದ ಹೈಕೋರ್ಟ್‌ ಯಡಿಯೂರಪ್ಪ ವಿರುದ್ಧದ ಬಂಧನದ ವಾರೆಂಟ್‌ನ್ನು ಪ್ರಶ್ನಿಸಿ, ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಜೂ.17 ರಂದು ತನಿಖೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದೇ ವೇಳೆ ಜೂ.17 ರಂದು ತನಿಖೆಗೆ ಹಾಜರಾಗುವಂತೆ ನ್ಯಾಯಾಲಯ ಬಿ.ಎಸ್‌ ಯಡಿಯೂರಪ್ಪಗೆ ಸೂಚಿಸಿದೆ.

ಏನಿದು ಪ್ರಕರಣ?
53 ವರ್ಷದ ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಅತ್ಯಾಚಾರ ನಡೆದಿದೆ ನನಗೆ ನ್ಯಾಯ ಕೊಡಿಸಿ ಎಂದು 2024ರ ಮಾರ್ಚ್‌ 14 ರಂದು ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ 354(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ದೂರು ನೀಡಿದ ಸಂತ್ರಸ್ತೆಯ ತಾಯಿ ಮರಣ ಹೊಂದಿದ ಬಳಿಕ ಸಂತ್ರಸ್ತೆ ಅಣ್ಣ ಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಈ ಸಂಬಂಧ ಸದಾಶಿವ ನಗರದಲ್ಲಿ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಸಿಐಡಿ ಅಧಿಕಾರಿಗಳು ಬಿಎಸ್‌ವೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ (ಜೂನ್‌. 12) ನೋಟಿಸ್‌ ಜಾರಿ ಮಾಡಿದ್ದರು. ಆದರೆ ಬಿಎಸ್‌ವೈ ಅವರು ಜೂನ್‌.17 ರಂದು ಹಾಜರಾಗುವುದಾಗಿ ವಿಚಾರಣೆಯಿಂದ ಹಿಂದೆ ಸರಿದಿದ್ದರು.