ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿದೆ.
ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿತ್ತು.
ಇದೀಗ ಡ್ರೋನ್ ಪ್ರತಾಪ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ನಾಳೆ ಜೈಲಿನಿಂದ ರಿಲೀಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಿಡಿಗೇಶಿ ಠಾಣೆ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಬಂಧಿಸಿದ ಮಧುಗಿರಿ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು.
ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ಬಂಧಿಸಿದ್ದ ಪೊಲೀಸರು, ಪ್ರತಾಪ್ ವಿರುದ್ಧ ಪ್ರಕರಣ ದಾಖಲಿಸಿದ್ದರು.