ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ. ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ವಾರ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು.
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಪೊಲೀಸರು ನಿನ್ನೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಯಡಿಯೂರಪ್ಪ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…