ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್ ಬಿಗ್ ಶಾಕ್ ನೀಡಿದೆ.
ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮೇ.7ರೊಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಲೋಕಾಯುಕ್ತರ ಅಂತಿಮ ವರದಿಯ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಅಲ್ಲದೇ ಇ.ಡಿ ಕೂಡ ತಕರಾರು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಕೋರ್ಟ್ ಹೇಳಿದ್ದು, ಮೇ.7ರ ಒಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ನೀಡಬೇಕು. ಅಲ್ಲಿಯವರೆಗೂ ಇ.ಡಿ ತನಿಖೆಗೂ ಕೂಡ ತಡೆ ಇರಲಿದೆ ಎಂದು ತಿಳಿಸಿದೆ.
ಈ ಮೂಲಕ ಮೈಸೂರು ಮುಡಾ ಹಗರಣದಲ್ಲಿ ಕೊಂಚ ರಿಲೀಫ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.





