ರಾಜ್ಯ

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ಶಾಕ್‌

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ.

ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್‌ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮೇ.7ರೊಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಲೋಕಾಯುಕ್ತರ ಅಂತಿಮ ವರದಿಯ ಬಳಿಕವೇ ಬಿ ರಿಪೋರ್ಟ್‌ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಕೋರ್ಟ್‌ ತಿಳಿಸಿದೆ.

ಅಲ್ಲದೇ ಇ.ಡಿ ಕೂಡ ತಕರಾರು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಕೋರ್ಟ್‌ ಹೇಳಿದ್ದು, ಮೇ.7ರ ಒಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ನೀಡಬೇಕು. ಅಲ್ಲಿಯವರೆಗೂ ಇ.ಡಿ ತನಿಖೆಗೂ ಕೂಡ ತಡೆ ಇರಲಿದೆ ಎಂದು ತಿಳಿಸಿದೆ.

ಈ ಮೂಲಕ ಮೈಸೂರು ಮುಡಾ ಹಗರಣದಲ್ಲಿ ಕೊಂಚ  ರಿಲೀಫ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ ಕೋರ್ಟ್‌ ಬಿಗ್‌ ಶಾಕ್‌ ನೀಡಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

3 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

19 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

28 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

1 hour ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

2 hours ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

2 hours ago