Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ಶಾಕ್‌

ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ಶಾಕ್‌ ಎದುರಾಗಿದ್ದು, ತ್ವರಿತ ನ್ಯಾಯಾಲಯದ ಸಮನ್ಸ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಕಾಗ್ನಿಜೆನ್ಸ್‌ ಪಡೆದು ಸಮನ್ಸ್‌ ನೀಡಿದ ಕ್ರಮ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಬಿ.ಎಸ್.ಯಡಿಯೂರಪ್ಪ ಖುದ್ದು ಹಾಜರಾತಿಯಿಂದ ವಿನಾಯಿತಿಗೆ ಅರ್ಜಿ ಸಲ್ಲಿಸಬಹುದು. ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ.

ಇದನ್ನು ಓದಿ: ಫೋಕ್ಸೋ ಪ್ರಕರಣ: ಜೈಲಿನಿಂದ ಹೊರಬಂದ ಮುರುಘಾಶ್ರೀ ಫಸ್ಟ್‌ ರಿಯಾಕ್ಷನ್

ಫೆಬ್ರವರಿ.18ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ದಿನಾಂಕ ನಿಗದಿಪಡಿಸಿ ತ್ವರಿತ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಲಿದೆ.

ಪ್ರಕರಣದ ಹಿನ್ನೆಲೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ನಂತರ ಮಾಜಿ ಸಿಎಂ ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

Tags:
error: Content is protected !!