ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ಶಾಕ್ ಎದುರಾಗಿದ್ದು, ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಕಾಗ್ನಿಜೆನ್ಸ್ ಪಡೆದು ಸಮನ್ಸ್ ನೀಡಿದ ಕ್ರಮ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಬಿ.ಎಸ್.ಯಡಿಯೂರಪ್ಪ ಖುದ್ದು ಹಾಜರಾತಿಯಿಂದ ವಿನಾಯಿತಿಗೆ ಅರ್ಜಿ ಸಲ್ಲಿಸಬಹುದು. ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ.
ಇದನ್ನು ಓದಿ: ಫೋಕ್ಸೋ ಪ್ರಕರಣ: ಜೈಲಿನಿಂದ ಹೊರಬಂದ ಮುರುಘಾಶ್ರೀ ಫಸ್ಟ್ ರಿಯಾಕ್ಷನ್
ಫೆಬ್ರವರಿ.18ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ದಿನಾಂಕ ನಿಗದಿಪಡಿಸಿ ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಲಿದೆ.
ಪ್ರಕರಣದ ಹಿನ್ನೆಲೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ನಂತರ ಮಾಜಿ ಸಿಎಂ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…