ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ತಿಂಗಳಿನಲ್ಲಿ 1 ದಿನ ಋತುಚಕ್ರ ರಜೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದೀಗ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಇದನ್ನು ಓದಿ: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಖಾಸಗಿ ವಲಯದಲ್ಲಿ ಋತುಚಕ್ರ ರಜೆ ಘೋಷಣೆಗೆ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರವಾಗಿ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡನೆ ಮಂಡಿಸಿದ್ದರು. ಇದೀಗ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಸರ್ಕಾರ ಮಂಜೂರು ಮಾಡಿತ್ತು.
ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು ಸರ್ಕಾರವು ತೀರ್ಮಾನಿಸಿ ಆದೇಶ ಹೊರಡಿಸಿತ್ತು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…