Mysore
16
clear sky

Social Media

ಮಂಗಳವಾರ, 20 ಜನವರಿ 2026
Light
Dark

ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌

big shocking for ksrtc transport unions

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಬಿಗ್‌ ಶಾಕ್‌ ನೀಡಿದೆ.

ನಾಳೆಯಿಂದ ಐದು ದಿನಗಳ ಕಾಲ ಸಾರಿಗೆ ನೌಕರರಿಗೆ ರಜೆ ರದ್ದು ಮಾಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.

ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ. ಹೀಗಾಗಿ ಜನರಿಗೆ ಸಮರ್ಪಕ ಸೇವೆ ಒದಗಿಸುವುದು ನಿಗಮದ ಕರ್ತವ್ಯ. ನಾಳೆಯಿಂದ ಅಕ್ಟೋಬರ್.‌19ರವರೆಗೆ ಉಪವಾಸ ಸತ್ಯಾಗ್ರಹದ ಅವಧಿಯಲ್ಲಿ ಸಾರಿಗೆ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಬಾರದು. ಅನಿವಾರ್ಯ ಸಂದರ್ಭ ಹೊತರುಪಡಿಸಿ ಯಾರಿಗೂ ರಜೆ ಇರುವುದಿಲ್ಲ. ನೋ ವರ್ಕ್‌, ನೋ ಪೇ ನಿಯಮ ಜಾರಿಗೊಳಿಸಿ ಖಡಕ್‌ ಆದೇಶ ಹೊರಡಿಸಿದೆ.

ಇನ್ನು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರರು ನಾಳೆಯಿಂದ ಐದು ದಿನಗಳ ಕಾಲ ಮೊದಲ ಹಂತದ ಹೋರಾಟದ ನಿಟ್ಟಿನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ನಡುವೆ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ರಜೆ ರದ್ದು ಮಾಡಿ ಆದೇಶ ಹೊರಡಿಸಿದೆ.

Tags:
error: Content is protected !!